

ಹಿಮಾಚಲ ಪ್ರದೇಶ: ಹಿಮಾಚಲ ಪ್ರದೇಶದ ಕಂಗ್ರಾ ಮತ್ತು ಕುಲು ಜಿಲ್ಲೆಗಳಲ್ಲಿ ಬುಧವಾರ ಮೇಘ ಸ್ಪೋಟ ಸಂಭವಿಸಿ ಉಂಟಾದ ದಿಢೀರ್ ಪ್ರವಾಹದಲ್ಲಿ ಸುಮಾರು 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ಇಬ್ಬರು ಸಾವನ್ನಪ್ಪಿದ್ದು, 20 ಜನರು ಕೊಚ್ಚಿಕೊಂಡು ಹೋಗಿದ್ದಾರೆ. ರಕ್ಷಣಾ ತಂಡಗಳು ನಾಪತ್ತೆಯಾದವರಿಗೆ ಶೋಧ ಕಾರ್ಯ ನಡೆಸುತ್ತಿವೆ.


ಕಂಗ್ರಾ ಜಿಲ್ಲೆಯ ಖಾನಿಯಾರಾದ ಮನುನಿ ಖಾದ್‌ನಲ್ಲಿ ಪ್ರವಾಹದ ಮಟ್ಟ ಏರಿಕೆಯಾದ ಕಾರಣ ಇಂದಿರಾ ಪ್ರಿಯದರ್ಶಿನಿ ಜಲವಿದ್ಯುತ್ ಯೋಜನಾ ಸ್ಥಳದ ಬಳಿ ನೆಲೆಸಿದ್ದ ಕಾರ್ಮಿಕ ಕಾಲೊನಿಯ ಸುಮಾರು 15ರಂದ 20 ಕಾರ್ಮಿಕರು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಶಂಕಿಸಲಾಗಿದೆ.
ಕುಲು ಜಿಲ್ಲೆಯ ರೆಹ್ಲಾ ಬಿಹಲ್ನಲ್ಲಿ ನೀರಿನ ಮಟ್ಟ ಏರಿಕೆಯಾಗಿ ಮನೆಯಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ತರಲು ಮನೆಗೆ ಹೋದ ಕೆಲವರು ಕಣ್ಮರೆಯಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.

