Akshaya Sharadhotsava
Darbe Salon
Mahalingeshwara Car Air Condition
New Dot Dress Mart

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮರಳು ಸಂಗ್ರಹಿಸಿದ್ದ ಪ್ರಕರಣ ಬೆಳಕಿಗೆ ಬಂದಿದೆ.

Out Look Fashion

ಜೂನ್ 27ರಂದು ಬಂದ ಖಚಿತ ಮಾಹಿತಿಯ ಮೇರೆಗೆ, ಕಡಬ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ಹಾಗೂ ಸಿಬ್ಬಂದಿ ಚಾರ್ವಾಕ ಗ್ರಾಮದ ಕುಂಬ್ಲಾಡಿಯಲ್ಲಿರುವ ಶ್ರೀ ಕುಕ್ಕೆನಾಥ ಬಾಲ ಸುಬ್ರಹ್ಮಣ್ಯ ದೇವಸ್ಥಾನದ ಆವರಣಕ್ಕೆ ತೆರಳಿ ಪರಿಶೀಲನೆ ನಡೆಸಿದರು.

Jaya Refrigeration and Air Condition

ಪರಿಶೀಲನೆ ವೇಳೆ ದೇವಸ್ಥಾನದ ಆವರಣದಲ್ಲಿ ಸುಮಾರು ಒಂದು ಟಿಪ್ಪರ್ ಲೋಡ್‌ನಷ್ಟು ಮರಳು ಸಂಗ್ರಹಿಸಿರುವುದು ಪತ್ತೆಯಾಗಿದೆ. ಈ ಮರಳಿನ ಅಂದಾಜು ಮೌಲ್ಯ ₹10 ಸಾವಿರ ಎಂದು ತಿಳಿಸಲಾಗಿದೆ.

ವಿಚಾರಣೆ ನಡೆಸಿದಾಗ, ದೇವಸ್ಥಾನದ ಅಧ್ಯಕ್ಷ ಗಣೇಶ್ ಅವರು ದೇವಸ್ಥಾನದ ದುರಸ್ತಿ ಕಾಮಗಾರಿಗಾಗಿ ಸಮೀಪದ ಕುಮಾರಧಾರ ನದಿಯಿಂದ ಯಾವುದೇ ಪರವಾನಿಗೆ ಪಡೆಯದೇ ಮರಳನ್ನು ಸಂಗ್ರಹಿಸಿರುವುದಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಬಳಿಕ ಪಂಚರ ಸಮಕ್ಷಮದಲ್ಲಿ ಮಹಜರು ನಡೆಸಿ ಅಕ್ರಮವಾಗಿ ಸಂಗ್ರಹಿಸಿದ್ದ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಈ ಸಂಬಂಧ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 80/2026 ದಾಖಲಿಸಲಾಗಿದ್ದು, MMCR-1994, MMRD-1957 ಹಾಗೂ BNS-2023ರ ಸಂಬಂಧಿತ ಕಲಂಗಳಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.