Akshaya Sharadhotsava
Darbe Salon
Mahalingeshwara Car Air Condition
New Dot Dress Mart

ವಿಟ್ಲ, ಜು.4: ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಮುಗುಳಿ ಪ್ರದೇಶದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಹಾಗೂ ಮಣ್ಣು ಗಣಿಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ, ಕೃತ್ಯಕ್ಕೆ ಬಳಸಲಾಗಿದ್ದ ವಾಹನಗಳು ಹಾಗೂ ಯಂತ್ರೋಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

Out Look Fashion

ಜುಲೈ 2ರಂದು ಸಂಜೆ ವಿಟ್ಲ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ, ಠಾಣಾ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದ ವೇಳೆ, ಪೊಲೀಸ್ ವಾಹನವನ್ನು ಗಮನಿಸಿದ ಗಣಿಗಾರಿಕೆಯಲ್ಲಿ ತೊಡಗಿದ್ದವರು ಸ್ಥಳದಿಂದ ಪರಾರಿಯಾಗಿದ್ದಾರೆ.

Jaya Refrigeration and Air Condition

ಸ್ಥಳ ಪರಿಶೀಲನೆ ವೇಳೆ ಯಾವುದೇ ಪರವಾನಗಿ ಇಲ್ಲದೆ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿರುವುದು ಪತ್ತೆಯಾಗಿದೆ. ಅಲ್ಲದೆ ಸಮೀಪದಲ್ಲೇ ಅಕ್ರಮ ಮಣ್ಣು ಗಣಿಗಾರಿಕೆಯೂ ನಡೆಯುತ್ತಿದ್ದು, ಮಣ್ಣು ಸಾಗಿಸುವ ಲಾರಿಗಳ ತೂಕ ತೂಗಲು ನಿರ್ಮಿಸಿದ್ದ ವೇ-ಬ್ರಿಡ್ಜ್, ಕಟ್ಟಡ ಹಾಗೂ ವಿವಿಧ ಯಂತ್ರೋಪಕರಣಗಳು ಪತ್ತೆಯಾಗಿವೆ.

ಪೊಲೀಸರು ಸ್ಥಳದಲ್ಲಿದ್ದ ವಾಹನಗಳು, ಯಂತ್ರೋಪಕರಣಗಳು ಸೇರಿದಂತೆ ಸಂಬಂಧಿತ ಸೊತ್ತುಗಳನ್ನು ವಶಪಡಿಸಿಕೊಂಡಿದ್ದು, ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಈ ಸಂಬಂಧ ಮುಳಿಗದ್ದೆ ಝಕಾರಿಯಾ ಹಾಗೂ ಇತರರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 148/2026 ದಾಖಲಿಸಲಾಗಿದ್ದು, BNS 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಮೈನರ್ ಮಿನರಲ್ ಕನ್ಸೆಷನ್ ರೂಲ್ಸ್ 1994ರ ಕಲಂ 3 ಮತ್ತು 44ರಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿದಿದೆ.