Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಸುಳ್ಯದಲ್ಲಿ ನೂತನ ಕಾರೊಂದು ಭೀಕರ ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಜುಲೈ 3ರಂದು ಸಂಜೆ ಸುಳ್ಯದ ಗಾಂಧಿನಗರದಲ್ಲಿ ಈ ಅಪಘಾತ ಸಂಭವಿಸಿದೆ. ಮಂಗಳೂರಿನಿಂದ ಹೊಸದಾಗಿ ಖರೀದಿಸಿದ್ದ ಕಾರಿನಲ್ಲಿ ದಂಪತಿ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದರು.

Out Look Fashion

ಗಾಂಧಿನಗರ ಸಮೀಪ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮಹಿಳೆಗೆ ಗಾಯಗಳಾಗಿದ್ದು, ಸ್ಥಳೀಯರು ಕೂಡಲೇ ರಕ್ಷಣೆಗೆ ಧಾವಿಸಿ ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Jaya Refrigeration and Air Condition

ಗಾಯಾಳುವಿಗೆ ಚಿಕಿತ್ಸೆ ಮುಂದುವರಿದಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.