Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬಂಟ್ವಾಳ ತಾಲೂಕಿನ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಟದ ವಿರುದ್ಧ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿದ್ದು, ಮರಳು ತುಂಬಿದ್ದ ಎರಡು ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

Out Look Fashion

ಜುಲೈ 4ರಂದು ಮಧ್ಯಾಹ್ನ ಯಾವುದೇ ಪರವಾನಿಗೆ ಇಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಪ್ರಕಾಶ್ ದೇವಾಡಿಗ ನೇತೃತ್ವದ ತಂಡ ಬಂಟ್ವಾಳ ತಾಲೂಕಿನ ಕುಳ ಗ್ರಾಮದ ಓಜಾಲ ಪ್ರದೇಶದಲ್ಲಿ ದಾಳಿ ನಡೆಸಿತು.

Jaya Refrigeration and Air Condition

ಈ ವೇಳೆ KA-51-AA-3057 ಹಾಗೂ KA-21-C-6924 ಸಂಖ್ಯೆಯ ಮರಳು ತುಂಬಿದ್ದ ಎರಡು ಟಿಪ್ಪರ್ ಲಾರಿಗಳು ಪತ್ತೆಯಾಗಿವೆ. ವಿಚಾರಣೆ ವೇಳೆ ಚಾಲಕರಾದ ಪುತ್ತೂರಿನ ಕೊಡಿಪಾಡಿ ನಿವಾಸಿ 28 ವರ್ಷದ ಮೊಹಮ್ಮದ್ ಇರ್ಪಾನ್ ಹಾಗೂ ಕಬಕ ನಿವಾಸಿ 26 ವರ್ಷದ ನೌಷದ್ ಅವರು ಕಡಬ ತಾಲೂಕಿನ ಅಲಂಕಾರ್ ಪ್ರದೇಶದಿಂದ ಯಾವುದೇ ಪರವಾನಿಗೆ ಅಥವಾ ದಾಖಲೆಗಳಿಲ್ಲದೆ ಮರಳನ್ನು ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಪೊಲೀಸರು ಎರಡೂ ಟಿಪ್ಪರ್ ಲಾರಿಗಳನ್ನು ವಶಕ್ಕೆ ಪಡೆದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಸಂಬಂಧಿತ ಕಾನೂನುಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಮುಂದುವರಿದಿದೆ.