




ಪುತ್ತೂರು: ಪುರುಷರಕಟ್ಟೆ ಘಟನೆಯಿಂದ ಆತಂಕಕ್ಕೆ ಒಳಗಾಗಿರುವ ಹಿಂದೂ ಯುವತಿಯ ನಿವಾಸಕ್ಕೆ ವಿಶ್ವ ಹಿಂದೂ ಪರಿಷತ್ ಪ್ರಮುಖರು ಭೇಟಿ ನೀಡಿ, ಯುವತಿ ಹಾಗೂ ಅವರ ಪೋಷಕರಿಗೆ ಧೈರ್ಯ ತುಂಬಿ ಸಾಂತ್ವನ ಹೇಳಿದರು.

ಈ ವೇಳೆ ಮಾತನಾಡಿದ ವಿಹಿಂಪ ಪ್ರಮುಖರು, ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿ ಯುವತಿಯರಲ್ಲಿ ಪ್ರಾಣಭಯ ಉಂಟುಮಾಡಿದ ಘಟನೆಯನ್ನು ಕೇವಲ “ತಪ್ಪು ಗ್ರಹಿಕೆ” ಎಂದು ಬಿಂಬಿಸಿ ಆರೋಪಿಗಳನ್ನು ರಕ್ಷಿಸಲು ರಾಜಕೀಯ ಸಂಧಾನದ ಪ್ರಯತ್ನ ನಡೆಯುತ್ತಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ಘಟನೆಯ ಕುರಿತು ಪೊಲೀಸ್ ಇಲಾಖೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ನ್ಯಾಯಯುತ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ ಸಂತ್ರಸ್ತ ಯುವತಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ, ಯುವತಿ ಮತ್ತು ಆಕೆಯ ಕುಟುಂಬದ ವಿರುದ್ಧ ದಾಖಲಾಗಿರುವ ಸುಳ್ಳು ಪ್ರಕರಣವನ್ನು ತಕ್ಷಣವೇ ಹಿಂಪಡೆಯಬೇಕು ಎಂದು ವಿಶ್ವ ಹಿಂದೂ ಪರಿಷತ್ ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪವೆಲ್, ಮಂಗಳೂರು ವಿಭಾಗ ಸಹ ಕಾರ್ಯದರ್ಶಿ ಶಿವಾನಂದ ಮೆಂಡನ್, ಪುತ್ತೂರು ಜಿಲ್ಲಾ ಅಧ್ಯಕ್ಷ ಕೃಷ್ಣ ಪ್ರಸನ್ನ, ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಹಾಗೂ ಪುತ್ತೂರು ನಗರ ಪ್ರಖಂಡ ಅಧ್ಯಕ್ಷ ದಾಮೋದರ ಪಟಾಲಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
