Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಅಮರಾವತಿ: ಆಂಧ್ರಪ್ರದೇಶದಲ್ಲಿ(Andhra Pradesh) ಮತ್ತೆ ಕೋವಿಡ್-19 (COVID- 19) ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

Out Look Fashion

ರಾಜಂಪೇಟೆ ಮೂಲದ 52 ವರ್ಷದ ವ್ಯಕ್ತಿಗೆ ಜ್ವರ ಮತ್ತು ಕೆಮ್ಮು ಕಾಣಿಸಿಕೊಂಡಿತ್ತು. ವೈದ್ಯಕೀಯ ಪರೀಕ್ಷೆಯಲ್ಲಿ ಕೋವಿಡ್ ದೃಢಪಟ್ಟ ಬಳಿಕ ವೆಲ್ಲೂರಿನ ಸಿಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

Jaya Refrigeration and Air Condition

ಇನ್ನೊಂದು ಪ್ರಕರಣದಲ್ಲಿ, 43 ವರ್ಷದ ವ್ಯಕ್ತಿಯೊಬ್ಬರು ಆರೋಗ್ಯ ಸಮಸ್ಯೆಯಿಂದ ಕಡಪ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಬಳಿಕ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೃತಪಟ್ಟಿದ್ದಾರೆ.

ಕಡಪ ವೈದ್ಯಕೀಯ ಕಾಲೇಜಿನ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೂ ಕೋವಿಡ್ ಸೋಂಕು ದೃಢಪಟ್ಟಿದೆ. ಅವರು ಸದ್ಯ ಮನೆಯಲ್ಲೇ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.