Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪರಂಗೀಪೇಟೆಯಲ್ಲಿರುವ ಮೆನೆಜಸ್ ಪ್ಲಾಜಾ ಕಾಂಪ್ಲೆಕ್ಸ್‌ನ ಕೆನರಾ ಬ್ಯಾಂಕ್ ಶಾಖೆಯಲ್ಲಿ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

Out Look Fashion

ಜುಲೈ 12ರ ರಾತ್ರಿ ವೇಳೆ ದುಷ್ಕರ್ಮಿಗಳು ಬ್ಯಾಂಕಿನ ಮೇಲ್ಛಾವಣಿಯನ್ನು ತುಂಡರಿಸಿ ಒಳಗೆ ಪ್ರವೇಶಿಸಿದ್ದಾರೆ. ಸೋಮವಾರ ಬೆಳಿಗ್ಗೆ ಬ್ಯಾಂಕ್ ಸಿಬ್ಬಂದಿ ಶಾಖೆ ತೆರೆದಾಗ ಘಟನೆ ಪತ್ತೆಯಾಗಿದೆ.

Jaya Refrigeration and Air Condition

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು, ಬೆರಳಚ್ಚು ತಜ್ಞರ ತಂಡ ಹಾಗೂ ಎಫ್‌ಎಸ್‌ಎಲ್ (ಸೋಕೋ) ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

ಪ್ರಾಥಮಿಕ ತನಿಖೆಯ ಪ್ರಕಾರ ಬ್ಯಾಂಕಿನಿಂದ ಯಾವುದೇ ನಗದು ಅಥವಾ ಬೆಲೆಬಾಳುವ ವಸ್ತುಗಳು ಕಳವಾಗಿಲ್ಲ ಎಂದು ತಿಳಿದುಬಂದಿದೆ.

ಸ್ಥಳ ಪರಿಶೀಲನೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಳ್ಳತನಕ್ಕೆ ಯತ್ನಿಸಿದ ಆರೋಪಿಗಳ ಪತ್ತೆಗೆ ತನಿಖೆ ಮುಂದುವರಿಸಿದ್ದಾರೆ.