



ಮಂಗಳೂರಿನ ಸುರತ್ಕಲ್ನಲ್ಲಿ ಮನಕಲಕುವ ಘಟನೆ ನಡೆದಿದೆ. ಎಂಬಿಬಿಎಸ್ ವಿದ್ಯಾರ್ಥಿನಿಯೊಬ್ಬಳು ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಭಾಷಿತ ನಗರದಲ್ಲಿ ಮಂಗಳವಾರ ಸಂಜೆ ನಡೆದಿದೆ.

ಹುಬ್ಬಳ್ಳಿ ಮೂಲದ 20 ವರ್ಷದ ಮಹಾಲಕ್ಷ್ಮಿ ಅವರು ಪೋಷಕರೊಂದಿಗೆ ಫ್ಲಾಟ್ನಲ್ಲಿ ವಾಸವಿದ್ದು, ಮಂಗಳವಾರ ದೇಗುಲಕ್ಕೆ ತೆರಳಿ ಮನೆಗೆ ವಾಪಸ್ಸಾದ ಬಳಿಕ ಏಕಾಏಕಿ ಐದನೇ ಮಹಡಿಗೆ ತೆರಳಿ ಕೆಳಗೆ ಜಿಗಿದಿದ್ದಾರೆ ಎಂದು ತಿಳಿದುಬಂದಿದೆ.

ತೀವ್ರವಾಗಿ ಗಾಯಗೊಂಡ ವಿದ್ಯಾರ್ಥಿನಿಯನ್ನು ತಕ್ಷಣ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
