

ಭುವನೇಶ್ವರ: ಒಡಿಶಾದ ಪುರಿಯಲ್ಲಿಂದು ನಡೆಯುತ್ತಿದ್ದ ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಸಂಭವಿಸಿದ್ದು, 600ಕ್ಕೂ ಹೆಚ್ಚು ಭಕ್ತರು ಅಸ್ವಸ್ಥಗೊಂಡಿದ್ದಾರೆ. 40ಕ್ಕೂ ಹೆಚ್ಚು ಭಕ್ತರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಜಗನ್ನಾಥ ದೇವರು ಮತ್ತು ಅವರ ಅಣ್ಣ ಬಲಭದ್ರ ಮತ್ತು ತಂಗಿ ದೇವಿ ಸುಭದ್ರಾ ದೇವಿಯ ರಥಯಾತ್ರೆಯ ಸಂದರ್ಭದಲ್ಲಿ ಜನದಟ್ಟಣೆ ಹೆಚ್ಚಾಗಿದ್ದರಿಂದ ಕಾಲ್ತುಳಿತ ಸಂಭವಿಸಿದ್ದು, 600ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ಭಕ್ತರನ್ನ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಅಂಬುಲೆನ್ಸ್‌ಗಳು ರಥಯಾತ್ರೆ ಸ್ಥಳಕ್ಕೆ ತಲುಪಿವೆ. ಸಂತ್ರಸ್ತರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಉಳಿದವರಿಗೂ ಅಗತ್ಯ ವೈದ್ಯಕೀಯ ನೆರವು ನೀಡಲಾಗಿದೆ.


