Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬಂಟ್ವಾಳದ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯಳನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣದ ಆರೋಪಿ ಚೇತನ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಆದರೆ ಬಂಧನ ಅಥವಾ ವಶಕ್ಕೆ ಪಡೆದಿರುವ ಬಗ್ಗೆ ಪೊಲೀಸ್ ಇಲಾಖೆ ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ.

Out Look Fashion

ಬೆಳ್ತಂಗಡಿ ತಾಲೂಕಿನ ಓಡಿಲ್ನಾಲ ನಿವಾಸಿಯಾಗಿರುವ ಚೇತನ್, ಬಸ್ ನಿಲ್ದಾಣದಲ್ಲೇ ಲಾವಣ್ಯ ಮೇಲೆ ಹರಿತವಾದ ಆಯುಧದಿಂದ ದಾಳಿ ನಡೆಸಿ ಪರಾರಿಯಾಗಿದ್ದನು. ಜನನಿಬಿಡ ಪ್ರದೇಶದಲ್ಲೇ ನಡೆದ ಈ ಭೀಕರ ಹತ್ಯೆ ಇಡೀ ದಕ್ಷಿಣ ಕನ್ನಡ ಜಿಲ್ಲೆಯನ್ನು ಬೆಚ್ಚಿಬೀಳಿಸಿತ್ತು.

Jaya Refrigeration and Air Condition

ಆರೋಪಿಯ ಪತ್ತೆಗಾಗಿ ಬಂಟ್ವಾಳ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ವಿವಿಧ ಕಡೆಗಳಲ್ಲಿ ಶೋಧ ಕಾರ್ಯ ನಡೆಸಿದ್ದರು. ಇದೀಗ ಚೇತನ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಕುರಿತು ಅಧಿಕೃತ ಪ್ರಕಟಣೆ ಇನ್ನೂ ಹೊರಬಿದ್ದಿಲ್ಲ.

ಮೃತ ಲಾವಣ್ಯ ಕಲ್ಲಡ್ಕದ ಖಾಸಗಿ ನರ್ಸಿಂಗ್ ಹೋಂನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿ ಬಿ.ಸಿ.ರೋಡ್ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಬಂದು ಕಕ್ಯಪದವಿಗೆ ತೆರಳುವ ಬಸ್‌ನಲ್ಲಿ ಕುಳಿತಿದ್ದ ವೇಳೆ ಆರೋಪಿ ಅಲ್ಲಿಗೆ ಬಂದಿದ್ದಾನೆ. ಆತನನ್ನು ಕಂಡು ಬೆದರಿದ ಲಾವಣ್ಯ ಬಸ್‌ನಿಂದ ಇಳಿದ ತಕ್ಷಣ ಚೇತನ್ ಬೆನ್ನಟ್ಟಿ ಬಂದು ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.

ಕೃತ್ಯದ ಬಳಿಕ ಆಯುಧ ಹಿಡಿದುಕೊಂಡೇ ಬಸ್ ನಿಲ್ದಾಣದಿಂದ ಹೆದ್ದಾರಿ ಕಡೆಗೆ ಓಡಿ, ಬಳಿಕ ವಾಹನವೊಂದರಲ್ಲಿ ಪರಾರಿಯಾಗಿದ್ದನು. ಗಂಭೀರವಾಗಿ ಗಾಯಗೊಂಡಿದ್ದ ಲಾವಣ್ಯರನ್ನು ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಆಕೆ ಮೃತಪಟ್ಟಿರುವುದಾಗಿ ಘೋಷಿಸಿದ್ದರು.

ಈ ಪ್ರಕರಣ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಈ ನಡುವೆ ಆರೋಪಿಯ ಬಂಧನದ ಕುರಿತು ಬಂಟ್ವಾಳ ಪೊಲೀಸ್ ಇಲಾಖೆಯ ಅಧಿಕೃತ ಮಾಹಿತಿ ಹೊರಬೀಳುವ ನಿರೀಕ್ಷೆ ಇದೆ.