



ನಿನ್ನೆ ಬಂಟ್ವಾಳದ ಬಿ.ಸಿ.ರೋಡ್ನಲ್ಲಿ ನಡೆದ ಯುವತಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ.


ಪ್ರಕರಣದ ಆರೋಪಿಯನ್ನು ಪೊಲೀಸರು ಪತ್ತೆಹಚ್ಚಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆರೋಪಿ ಇಲಿಪಾಷಾಣ (ವಿಷ) ಸೇವಿಸಿರುವ ಶಂಕೆ ವ್ಯಕ್ತವಾಗಿದ್ದು, ತಕ್ಷಣವೇ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.

ಪ್ರಸ್ತುತ ಆರೋಪಿಯ ಆರೋಗ್ಯದ ಬಗ್ಗೆ ವೈದ್ಯರು ಪರಿಶೀಲನೆ ನಡೆಸುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದ ಹೆಚ್ಚಿನ ಅಧಿಕೃತ ಮಾಹಿತಿ ಲಭ್ಯವಾಗುತ್ತಿದ್ದಂತೆ ತಿಳಿಸಲಾಗುವುದು.
