Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ.

Out Look Fashion
Screenshot

ಮೃತರನ್ನು ಬೆಟ್ಟಂಪಾಡಿ ಮಿತ್ತಡ್ಕ ನಿವಾಸಿ ಹಾಗೂ ಈಶ್ವರಮಂಗಲದಲ್ಲಿ ಕಮ್ಯೂನಿಟಿ ಹೆಲ್ತ್ ಆಫೀಸರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಜ್ಞಾ (26) ಎಂದು ಗುರುತಿಸಲಾಗಿದೆ.

Jaya Refrigeration and Air Condition

ಕೆಲ ದಿನಗಳ ಹಿಂದೆ ಪ್ರಜ್ಞಾ ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಯತ್ನಿಸಲು ನಿಖರ ಕಾರಣ ಏನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ.