Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬಂದಾರು: ಪುತ್ತೂರು ತಾಲೂಕಿನ ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಅಡೆಂಕಿರಿಮಜಲು ಪ್ರದೇಶದಲ್ಲಿ ಚಿರತೆ ದಾಳಿ ನಡೆಸಿರುವ ಘಟನೆ ವರದಿಯಾಗಿದೆ.

Out Look Fashion

ಜುಲೈ 19ರ ಮುಂಜಾನೆ ಸುಮಾರು 2.30 ಗಂಟೆ ವೇಳೆಗೆ ಸೇಸಪ್ಪ ಗೌಡ ಅವರ ದನದ ಹಟ್ಟಿಗೆ ನುಗ್ಗಿದ ಚಿರತೆ, ಅಲ್ಲಿದ್ದ ಕರುವಿನ ಮೇಲೆ ದಾಳಿ ನಡೆಸಿದೆ.

Jaya Refrigeration and Air Condition

ಕಳೆದ ಹಲವು ದಿನಗಳಿಂದ ಕಾಡಂಡ, ಬೈಪಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಓಡಾಡುತ್ತಿರುವುದು ಕಂಡುಬಂದಿದ್ದು, ಸ್ಥಳೀಯ ನಿವಾಸಿಗಳಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

ಗ್ರಾಮಸ್ಥರು ಅರಣ್ಯ ಇಲಾಖೆಯು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಚಿರತೆಯನ್ನು ಸೆರೆಹಿಡಿಯಲು ಅಥವಾ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಸ್ಥಳೀಯರು ರಾತ್ರಿ ವೇಳೆ ಅನಗತ್ಯವಾಗಿ ಹೊರಗೆ ಸಂಚರಿಸದಂತೆ ಎಚ್ಚರಿಕೆ ವಹಿಸುವಂತೆಯೂ ಮನವಿ ಮಾಡಲಾಗಿದೆ.