Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರಿನ ಮೇರಿಹಿಲ್‌ನಲ್ಲಿ ನಡೆದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಪ್ರಕರಣವನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಕೇವಲ 24 ಗಂಟೆಯೊಳಗೆ ಭೇದಿಸಿದ್ದು, ಮನೆ ಕಾಮಗಾರಿಗೆ ಬಂದಿದ್ದ ಕೆಲಸಗಾರನನ್ನೇ ಬಂಧಿಸಿದ್ದಾರೆ.

Out Look Fashion

ಮೇರಿಹಿಲ್ ಬಾಂದೋಟ್ಟು ಪ್ರದೇಶದ ಮನೆಯೊಂದರಲ್ಲಿ ಛಾವಣಿ ಹಾಗೂ ಫಾಲ್ಸ್ ಸೀಲಿಂಗ್ ಕಾಮಗಾರಿ ನಡೆಯುತ್ತಿದ್ದ ವೇಳೆ, ಟೇಬಲ್ ಡ್ರಾವರ್‌ನಲ್ಲಿ ಇರಿಸಿದ್ದ ಸುಮಾರು 49 ಗ್ರಾಂ ತೂಕದ ಚಿನ್ನಾಭರಣಗಳು ಹಾಗೂ ಗೋಲ್ಡ್ ಕೋಟೆಡ್ ವಾಚ್ ಕಳುವಾಗಿತ್ತು. ಕಳುವಾದ ಸೊತ್ತಿನ ಒಟ್ಟು ಮೌಲ್ಯ ಸುಮಾರು ₹6.37 ಲಕ್ಷ ಎಂದು ಅಂದಾಜಿಸಲಾಗಿದೆ.

Jaya Refrigeration and Air Condition

ಈ ಸಂಬಂಧ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಮನೆ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕರನ್ನು ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಉತ್ತರ ಪ್ರದೇಶ ಮೂಲದ, ಪ್ರಸ್ತುತ ಮಂಗಳೂರಿನ ಬಂದರು ಪ್ರದೇಶದಲ್ಲಿ ವಾಸವಾಗಿರುವ ಜಹೀರುದ್ದೀನ್ (24) ಕಳವು ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ ಕಳುವಾದ ಎಲ್ಲಾ ಚಿನ್ನಾಭರಣಗಳು ಹಾಗೂ ವಾಚ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಈ ಪ್ರಕರಣವನ್ನು ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಡಿ.ಆರ್. ಮಂಜಪ್ಪ, ಸಬ್ ಇನ್ಸ್ಪೆಕ್ಟರ್ ಅರುಣ್ ಕುಮಾರ್ ಡಿ. ಹಾಗೂ ಸಿಬ್ಬಂದಿಯ ತಂಡ ಕ್ಷಿಪ್ರವಾಗಿ ತನಿಖೆ ನಡೆಸಿ 24 ಗಂಟೆಯೊಳಗೆ ಭೇದಿಸುವಲ್ಲಿ ಯಶಸ್ವಿಯಾಗಿದೆ.