Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಮಂಗಳೂರು: ನಗರದ ಕಾಲೇಜೊಂದರ ಪ್ರಥಮ ವರ್ಷದ ಇಬ್ಬರು ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿಗಳು ಹಲ್ಲೆ ನಡೆಸಿರುವ ಘಟನೆ ಮಂಗಳವಾರ ಗುಜ್ಜರಕೇರೆ ಪ್ರದೇಶದಲ್ಲಿ ನಡೆದಿದೆ.

Out Look Fashion

ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಇಬ್ಬರ ಮೇಲೆ ದ್ವಿತೀಯ ವರ್ಷದ ಸುಮಾರು ನಾಲ್ವರು ಹಿರಿಯ ವಿದ್ಯಾರ್ಥಿಗಳು ಚಹಾ ಅಂಗಡಿಯೊಂದರ ಬಳಿ ಏಕಾಏಕಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಯಿಂದ ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣವೇ ನಗರದ ಹೈಲ್ಯಾಂಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

Jaya Refrigeration and Air Condition

ಘಟನೆ ಕುರಿತು ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಪ್ರಕರಣದ ತನಿಖೆ ಆರಂಭಿಸಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್, ಮೇಲ್ನೋಟಕ್ಕೆ ಇದು ರಾಗಿಂಗ್ ಪ್ರಕರಣದಂತೆ ಕಂಡುಬರುತ್ತಿದೆ. ಆದರೆ, ಸಮಗ್ರ ತನಿಖೆಯ ನಂತರವೇ ಘಟನೆಯ ನಿಖರ ಸತ್ಯಾಸತ್ಯತೆ ತಿಳಿದುಬರಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.