

ಕನ್ನಡ ಸೇರಿದಂತೆ 750ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಬಹುಭಾಷಾ ನಟ ಕೋಟ ಶ್ರೀನಿವಾಸ ರಾವ್ (83) ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕೋಟ ಶ್ರೀನಿವಾಸ ರಾವ್ ಹೈದರಾಬಾದ್‌ನಲ್ಲಿರುವ ತಮ್ಮ ಮನೆಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟನ ನಿಧನಕ್ಕೆ ಇಡೀ ಚಿತ್ರರಂಗವೇ ಸಂತಾಪ ಸೂಚಿಸಿದೆ.


ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೋಟ ಶ್ರೀನಿವಾಸ ರಾವ್ ಮಗ ತೀರಿಕೊಂಡ ನಂತರ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
