


ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಬಿ. ಸರೋಜಾ ದೇವಿ (87) ಅವರು ಜು. 14ರಂದು ನಿಧನ ಹೊಂದಿದರು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಸುಮಾರು 6 ದಶಕಗಳ ಕಾಲ ಚಿತ್ರರಂಗದ ಸೇವೆ ಮಾಡಿರುವ ಇವರು 5 ಭಾಷೆಗಳಲ್ಲಿ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಚಿತ್ರರಂಗದ ಸಾಧನೆಗೆ ಇವರಿಗೆ ಕೇಂದ್ರ ಸರ್ಕಾರ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು.
ತಮ್ಮ 17ನೇ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಭೀಷ್ಮ ಹೊನ್ನಪ್ಪ ಭಾಗವತರ್ ಅವರ `ಮಹಾಕವಿ ಕಾಳಿದಾಸ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. 2019ರಲ್ಲಿ ಬಿಡುಗಡೆ ಗೊಂಡ ಪುನೀತ್ ರಾಜ್ ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ.


