

ಉಡುಪಿ: ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ಸಾಧ್ಯತೆ ಹಿನ್ನೆಲೆ, ಗಂಗೊಳ್ಳಿ ದುರಂತದ ಬೆನ್ನಲ್ಲೇ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಜು.18ರವರೆಗೆ ಜಿಲ್ಲೆಯ ಎಲ್ಲಾ ಮೀನುಗಾರರು ಸಮುದ್ರಕ್ಕೆ ತೆರಳಬಾರದು ಎಂದು ತಿಳಿಸಲಾಗಿದೆ.
ಮೀನುಗಾರರು ಸಮುದ್ರ ದಡದಲ್ಲಿ ನಿಲ್ಲಿಸಿರುವ ದೋಣಿ ಮತ್ತು ಬಲೆಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಬೇಕು. ಇನ್ಮುಂದೆ ಮೀನುಗಾರಿಕೆಗೆ ತೆರಳುವಾಗ ಕಡ್ಡಾಯವಾಗಿ ಜೀವರಕ್ಷಕ ಸಾಧನಗಳನ್ನು ಬಳಸಬೇಕು.
ಸುರಕ್ಷಿತ ಮೀನುಗಾರಿಕೆಯನ್ನು ಕೈಗೊಳ್ಳುವಂತೆ ಮೀನುಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


