

ಬೆಂಗಳೂರು (ಜೂ 15): ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಪಕ್ಷದ (JDS Party) ಬಲ ಹೆಚ್ಚಿಸಿಕೊಳ್ಳಲು ಜಿಲ್ಲಾ-ತಾಲೂಕು ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದೆ. ಮಿಸ್ಡ್ ಕಾಲ್ ಮೂಲಕ ಪಕ್ಷದ ಸದಸ್ಯತ್ವ ನೋಂದಣಿಗೆ ಚಾಲನೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ (HD Devegowda), ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ (Kumaraswamy) ಚಾಲನೆ ನೀಡಿದ್ದಾರೆ. ಇದೇ ವೇಳೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಹಾಗೂ ಶಾಸಕರು ಉಪಸ್ಥಿತರಿದ್ರು. ಇದೇ ವೇಳೆ ಮಾತಾಡಿದ ಮಾಜಿ ಪ್ರಧಾನಿ ದೇವೇಗೌಡ್ರು, ಜೆಡಿಎಸ್ ಕಥೆ ಮುಗಿತು ಎಂದವರಿಗೆ ಖಡಕ್ ಸಂದೇಶ ನೀಡಿದ್ದಾರೆ.
ಸರ್ಕಾರದ ವಿರುದ್ಧ ಅಸಮಾಧಾನ ಹೆಚ್ಡಿಡಿ ಅಸಮಾಧಾನ


ಕಾರ್ಯಕ್ರಮದಲ್ಲಿ ಮಾತಾಡಿದ ದೇವೇಗೌಡ್ರು, ನಾನು ಇಲ್ಲಿ ಯಾರನ್ನು ಟೀಕೆ ಮಾಡಲ್ಲ ಎಂದ್ರು. ಟೀಕೆಯಿಂದ ಏನು ಪ್ರಯೋಜನ ಆಗಲ್ಲ. ಭದ್ರಾವತಿ ಕಾರ್ಖಾನೆ, ಹೆಚ್ಎಂಟಿ, ಸೇರಿ ಅನೇಕ ಸಂಸ್ಥೆಗಳಿಗೆ ರಾಜ್ಯ ಸರ್ಕಾರದ ಅನುಮತಿಬೇಕು. ಇದರ ಬಗ್ಗೆ ಸೂಕ್ಷ್ಮವಾಗಿ ಹೇಳ್ತೇನೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ್ರು.
