ಪುಣೆ: ಪುಣೆಯ (Pune) ಪ್ರವಾಸಿ ಆಕರ್ಷಣೆಯಾದ ಮಾವಲ್ ತಾಲ್ಲೂಕಿನ ಕುಂದಮಾಲದಲ್ಲಿ ಮಳೆಗಾಲದ ಸಂದರ್ಭದಲ್ಲೇ ದುರಂತ ಸಂಭವಿಸಿದೆ. ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕೊಚ್ಚಿ ಹೋದ ಪರಿಣಾಮ 20 ರಿಂದ 25 ಪ್ರವಾಸಿಗರು ಕೊಚ್ಚಿ ಹೋಗಿದ್ದಾರೆ ಎಂದು ವರದಿಯಾಗಿದೆ. ಇಲ್ಲಿಯವರೆಗೆ ಆರು ಪ್ರವಾಸಿಗರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.