


ಚೆನ್ನೈ: ವಿಜಯ್ ಅವರ ಕರೂರ್ ರಾಜಕೀಯ ರ‍್ಯಾಲಿಯಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತ ಸಂಭವಿಸಿದ ಎರಡು ದಿನಗಳ ನಂತರ ಪಕ್ಷದ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿದ್ದಾನೆ.
ತಮಿಳಗ ವೆಟ್ರಿ ಕಳಗಂ (TVK) ವಿರ್ಪಟ್ಟು ಗ್ರಾಮ ಶಾಖೆಯ ಕಾರ್ಯದರ್ಶಿ ಅಯ್ಯಪ್ಪನ್ (52) ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


ಈ ಭೀಕರ ಘಟನೆಯಿಂದ ತನಗೆ ನೋವಾಗಿದೆ ಎಂದು ಭಾವನಾತ್ಮಕವಾಗಿ ಪತ್ರ ಬರೆದಿರುವ ಅವರು, ದುರಂತಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರುವುದರ ಜೊತೆಗೆ ಪೊಲೀಸರು ಸೂಕ್ತ ವ್ಯವಸ್ಥೆಗಳನ್ನು ಒದಗಿಸಿಲ್ಲ ಎಂದು ಆರೋಪಿಸಿದ್ದಾರೆ.
ಮಾಹಿತಿಯ ಮೇರೆಗೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಪತ್ರವನ್ನು ವಶಪಡಿಸಿಕೊಂಡು, ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಲ್ಲುಪುರಂನ ಮುಂಡಿಯಂಬಕ್ಕಂ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.
