Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಬೆಳ್ತಂಗಡಿ: ಹಲವಾರು ಮೃತದೇಹಗಳನ್ನು ಹೂತು ಹಾಕಿರುವ ಪ್ರಕರಣದಲ್ಲಿ ತನಿಖೆ ಮುಂದುವರಿಸಿರುವ ಎಸ್ಐಟಿ ಇದೀಗ ಬೆಳ್ತಂಗಡಿಯ ಇಬ್ಬರು ಆ್ಯಂಬುಲೆನ್ಸ್ ಚಾಲಕರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿಗೊಳಿಸಿದೆ.

Out Look Fashion

ಬೆಳ್ತಂಗಡಿಯ ಜಲೀಲ್ ಬಾಬಾ ಮತ್ತು ಹಮೀದ್ ಎಂಬ ಇಬ್ಬರು ಆ್ಯಂಬುಲೆನ್ಸ್ ಚಾಲಕರಿಗೆ ನೋಟಿಸ್ ಜಾರಿಯಾಗಿದೆ. ಇಬ್ಬರು ಸಮಾಜಸೇವಕ ಆ್ಯಂಬುಲೆನ್ಸ್‌ನಲ್ಲಿ ಚಾಲಕರಾಗಿದ್ದರು. ಧರ್ಮಸ್ಥಳ ಗ್ರಾಮದಲ್ಲಿ ಯುಡಿಆರ್ ಪ್ರಕರಣದ ಮೃತದೇಹಗಳನ್ನು ಶವಗಾರಕ್ಕೆ ಸಾಗಿಸಿರುವ ಬಗ್ಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಪೊಲೀಸರ ಸಮ್ಮುಖದಲ್ಲಿಯೇ ಶವಗಾರಕ್ಕೆ ಸಾಗಿಸಲಾಗಿತ್ತೇ ಎಂಬುದರ ಬಗ್ಗೆ ಮಾಹಿತಿ ಪಡೆಯಲು ವಿಚಾರಣೆ ನಡೆಸುವ ಸಾಧ್ಯತೆಯಿದೆ.

Jaya Refrigeration and Air Condition