




ಉಡುಪಿ ತಾಲೂಕಿನ 80 ಬಡಗುಬೆಟ್ಟು ಗ್ರಾಮದ ರಾಜೀವ್ ನಗರ ಬಸ್ ನಿಲ್ದಾಣದ ಹತ್ತಿರ ನಡೆದ ಜುಗಾರಿ ದಾಳಿಯಲ್ಲಿ ನಾಲ್ವರು ಆರೋಪಿಗಳು ಪೊಲೀಸರ ಬಲೆಗೆ ಸಿಕ್ಕಿದ್ದಾರೆ.

ಮಣಿಪಾಲ ಪೊಲೀಸ್ ಠಾಣೆಯ ಪಿ.ಎಸ್.ಐ ಅನೀಲ್ ಕುಮಾರ್ ಬಿ.ಎಂ ಹಾಗೂ ಸಿಬ್ಬಂದಿ ಪಡೆದ ಗುಪ್ತ ಮಾಹಿತಿಯ ಆಧಾರದ ಮೇಲೆ 05 ಅಕ್ಟೋಬರ್ ಸಂಜೆ 6 ಗಂಟೆಗೆ ಸ್ಥಳಕ್ಕೆ ದಾಳಿ ನಡೆಸಿ, ಅಂದರ್-ಬಾಹರ್ ಇಸ್ಪೀಟ್ ಜುಗಾರಿ ಆಟದಲ್ಲಿ ತೊಡಗಿದ್ದ ನಾಲ್ವರನ್ನು ಬಂಧಿಸಿದರು.

ಬಂಧಿತರಾದವರು — ಜಯಂತ್ ಪೂಜಾರಿ (37), ಶರಣಪ್ಪ ಪೂಜಾರಿ (45), ಈಶ (36) ಹಾಗೂ ಹಾಲೇಶ (35) ಎಂದು ಗುರುತಿಸಲಾಗಿದೆ.
ದಾಳಿಯಲ್ಲಿ ಪೊಲೀಸರು ರೂ. 2,100 ನಗದು ಹಾಗೂ 52 ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 180/2025, ಕಲಂ 87 ಕೆ.ಪಿ. ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
