Screenshot

ಬೆಂಗಳೂರು: ಇತ್ತೀಚೆಗೆ ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಕೇಳಲಾದ ಚುಕ್ಕೆ ಗುರುತಿಲ್ಲದ ಪ್ರಶ್ನೆಯ ಉತ್ತರದಲ್ಲಿ ತಿಳಿದು ಬಂದಿರುವ ಪ್ರಕಾರ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಮಾರು 2,84,881 ಹುದ್ದೆಗಳು ಖಾಲಿ ಇದ್ದು,ರಾಜ್ಯದಲ್ಲಿ ಅರ್ಹ ವಿದ್ಯಾರ್ಹತೆ ಪಡೆದ ಲಕ್ಷಾಂತರ ಯುವಜನತೆ ಸರ್ಕಾರಿ ಉದ್ಯೋಗದ ನೇಮಕಾತಿಯ ಸ್ಪರ್ಧಾತಕ ಪರೀಕ್ಷೆಗೆ ತಯಾರಾಗಿ ನೇಮಕಾತಿಗೆ ಕಾಯುತ್ತಿದ್ದು ಸದರಿ ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸಲು 2026-27 ನೇ ಸಾಲಿನ ಬಜೆಟ್‌ ನಲ್ಲಿ ವಿವಿಧ ಇಲಾಖೆಗಳಲ್ಲಿರುವ ಖಾಲಿ ಹುದ್ದೆಗಳ ಭರ್ತಿಗೆ ಅವಕಾಶ ಕಲ್ಪಿಸಿ ಸದರಿ ಉದ್ಯೋಗಾಕಾಂಕ್ಷಿ ಯುವಜನತೆಗೆ ಸರ್ಕಾರಿ ಉದ್ಯೋಗ ಕಲ್ಪಿಸಲು ಮತ್ತು ಖಾಲಿ ಹುದ್ದೆಗಳು ಭರ್ತಿಯಾಗುವುದರಿಂದ ಸಾರ್ವಜನಿಕರಿಗೆ ಸರ್ಕಾರಿ ಸೇವೆಗಳು ಸುಗಮವಾಗಿ ಲಭ್ಯವಾಗಿ ಆಡಳಿತ ವ್ಯವಸ್ಥೆ ಉತ್ತಮಗೊಳ್ಳುವುದರಿಂದ ಈ ಬಗ್ಗೆ ಕ್ರಮವಹಿಸುವಂತೆ ಕೋರಿ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಾದ ಶ್ರೀಮತಿ ಶಾಲಿನಿ ರಜನೀಶ್‌ ರವರನ್ನು ಭೇಟಿ ಮಾಡಿ ಕೋರಲಾಯಿತು. ಮನವಿಗೆ ಸ್ಪಂದಿಸಿದ ಮುಖ್ಯ ಕಾರ್ಯದರ್ಶಿಯವರು ಈ ಬಗ್ಗೆ ಚರ್ಚಿಸಿ ಸದರಿ ಬೇಡಿಕೆಯಂತೆ ಸೂಕ್ತ ಕ್ರಮವಹಿಸುವುದಾಗಿ ತಿಳಿಸಿದರು.