


ಭಾರತೀಯ ಜನತಾ ಪಾರ್ಟಿ ವತಿಯಿಂದ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬೃಹತ್ ಪಾದಯಾತ್ರೆ ಫೆಬ್ರವರಿ 14 ರಂದು ಬೆಳಗ್ಗೆ ಉಪ್ಪಿನಂಗಡಿಯಲ್ಲಿ ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ಸರಿಯಾಗಿ ಉಪ್ಪಿನಂಗಡಿಯ ಮೇಲುಸೇತುವೆಯ ಬಳಿಯಿಂದ ಹೊರಟು ಉಪ್ಪಿನಂಗಡಿಯಲ್ಲಿ ಸಭಾಕಾರ್ಯಕ್ರಮದೊಂದಿಗೆ ಮುಕ್ತಾಯಗೊಳ್ಳಲಿದೆ.


ಈ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಚಲವಾದಿ ನಾರಾಯಣ ಸ್ವಾಮಿ, ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು, ಸಂಜೀವ ಮಠದೂoರ್ ಮತ್ತು ದಯಾನಂದ ಉಜಿರೆಮಾರ್ ಭಾಗವಹಿಸಲಿದ್ದಾರೆ.
