Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಪುತ್ತೂರು : ಜೆಟ್ ವಿಮಾನವೊಂದು ಹಲವು ಬಾರಿ ಭೂಮಿ ಮಟ್ಟಕ್ಕೆ ಅತೀ ಸಮೀಪದಲ್ಲಿ ಹಾರಾಟ ನಡೆಸುತ್ತಿದ್ದ ದೃಶ್ಯ ಪುತ್ತೂರು ನಗರದಲ್ಲಿ ಕಂಡು ಬಂದಿದ್ದು ಏನಿದು ಎಂಬ ಆತಂಕ ಮೂಡಿದ ಬೆನ್ನಲ್ಲೇ ಇದು ಭೂ ವಿಜ್ಞಾನಕ್ಕೆ ಸಂಬಂಧಿಸಿದ ಸರ್ವೇ ಕಾರ್ಯ ಎಂದು ತಿಳಿದು ಬಂದಿದೆ.

Out Look Fashion

ಮಂಗಳವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದ ಗದ್ದೆ ಮೇಲ್ಭಾಗದಲ್ಲಿ ನೆಲ ಮಟ್ಟಕ್ಕೆ ಅತಿ ಸಮೀಪದಲ್ಲಿ ಜೆಟ್ ವಿಮಾನ ಹಾರಾಡುತ್ತಿದ್ದ ದೃಶ್ಯವನ್ನು ಜನರು ನೋಡಿದ್ದು ಪದೇ ಪದೇ ನಗರದ ವಿವಿಧ ಭಾಗದಲ್ಲಿ ಹಾರಾಟ ನಡೆಸಿದೆ. ಸುಮಾರು‌10 ರಿಂದ 15 ಸುತ್ತು ಹಾರಾಟ ನಡೆಸಿದೆ. ಇದು ಯಾರದ್ದು, ಯಾಕೆ ಹಾರಾಟ ನಡೆಸಿದೆ ಎನ್ಮುವ ಮಾಹಿತಿ ಲಭ್ಯವಾಗಿರಲಿಲ್ಲ. ಏಕಾಏಕಿ ವಿಮಾನ‌ ಹಾರಾಟ ನಡೆಸುತ್ತಿದ್ದ ದೃಶ್ಯ ಜನರಲ್ಲಿ ಆತಂಕ ಮೂಡಿಸಿತು. ಕೊನೆಗೂ ಇದು ಭೂಮಿಯ ರಚನೆ, ಅಧ್ಯಯನಕ್ಕೆ ಸಂಬಂಧಿಸಿದಂತೆ ನಡೆದ ಜೆಟ್ ವಿಮಾನ ಸರ್ವೆಯಾಗಿದೆ ಎಂಬ‌ ಮಾಹಿತಿ ಲಭಿಸಿದೆ.


Jaya Refrigeration and Air Condition