ಮಧ್ಯಪ್ರಾಚ್ಯದಲ್ಲಿ ಇಸ್ರೇಲ್-ಅಮೆರಿಕಾ ಮತ್ತು ಇರಾನ್ ದೇಶಗಳ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಪರಿಣಾಮ ಇಡಿ ಪ್ರಪಂಚದ ಮೇಲಾಗುತ್ತಿದೆ. ಭಾರತಕ್ಕೆ ಶೇ 50 ಕ್ಕಿಂತಲೂ ಅಧಿಕ ತೈಲ ಸಾಗಾಟವಾಗುತ್ತಿದ್ದ ಹಾರ್ಮೊಸ್ ಜಲಸಂಧಿಯನ್ನು ಇರಾನ್ ಮುಚ್ಚಿರುವ ಪರಿಣಾಮ ಭಾರತದ ತೈಲ ಮಾರುಕಟ್ಟೆ ಮೇಲೆ ಭಾರೀ ಪರಿಣಾಮ ಬೀರಿದೆ.

ಯುದ್ಧದ ಪರಿಣಾಮ ಭಾರತದ ತೈಲ ಮಾರುಕಟ್ಟೆಯಲ್ಲಿ ಬೆಲೆ ಏರಿಕೆ ಬಿಸಿತಟ್ಟಿದ್ದು, ದಿನ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ 60 ರೂಪಾಯಿಯಷ್ಟು ಏರಿಕೆಯಾಗಿದೆ. ಅಲ್ಲದೆ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲೂ ಭಾರೀ ಏರಿಕೆಯಾಗಿದ್ದು 115 ರೂ ಏರಿಕೆಯಾಗಿದೆ.

ಮುಂದಿನ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ದರದಲ್ಲೂ ಏರಿಕೆಯಾಗುವ ಸಾಧ್ಯತೆ ಇದ್ದು, ಇದರಿಂದ ಅಗತ್ಯ ವಸ್ತುಗಳ ಬೆಲೆಯಲ್ಲೂ ಏರಿಕೆ ಆಗುವ ಸಾಧ್ಯತೆ ಇದೆ.