



ದಕ್ಷಿಣ ಕನ್ನಡ: ಕೆ ಎಸ್ ಆರ್ ಟಿ ಸಿ ಬಸ್ ಹಾಗು ಕಾರ್ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಶಿರಾಡಿ ಘಾಟ್ ನಲ್ಲಿ ನಡೆದಿದೆ.


ಪುತ್ತೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗುಂಡ್ಯ ಸಮೀಪ ಸಕಲೇಶಪುರಕ್ಕೆ ಮದುವೆಗೆ ತೆರಳಿ ವಾಪಾಸ್ ಆಗುತ್ತಿದ್ದಾಗ ರಾಜಹಂಸ ಬಸ್ ಹಾಗೂ ಸ್ವಿಫ್ಟ್ ಕಾರು ನಡುವೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನಪ್ಪಿದ್ದಾರೆ.


ಮೃತರನ್ನು ಶಿಶಿಲ ನಿವಾಸಿ ಚಂದ್ರಶೇಖರ್ ಗೌಡ , ಉಜಿರೆ ನಿವಾಸಿ ಶ್ರೀಧರ್ ,ಉಜಿರೆ ನಿವಾಸಿ ಜನಾರ್ದನ ಕೆರಿಮಾರ್
ಮೃತರಾದವರು. ಸುರೇಶ್ ಎಂಬವರಿಗೆ ಗಂಭೀರ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ತೆರಳಿ ಪುತ್ತೂರು ನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
