

ಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ ತಂಪೆರೆದಿದ್ದಾನೆ.

ಕೊಡಗು ಜಿಲ್ಲೆಯ ಹಲವೆಡೆ ಧಾರಾಕಾರವಾಗಿ ಮಳೆ ಸುರಿದಿದ್ದು, ಗುಡುಗು ಸಹಿತ ವರುಣ ಅಬ್ಬರಿಸಿದ್ದಾರೆ. ಇತ್ತ ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿತ್ತು.


ಹಾಸನ ಜಿಲ್ಲೆಯ ವಿವಿಧೆಡೆ ಧಾರಾಕಾರವಾಗಿ ಆಲಿಕಲ್ಲು ಮಳೆಯಾಗಿದೆ. ಆಲಿಕಲ್ಲು, ಬಿರುಗಾಳಿ, ಗುಡುಗು, ಮಿಂಚು, ಸಿಡಿಲು ಸಹಿತ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದ ವಾಹನ ಸವಾರರು ಹಾಗೂ ಬೀದಿ ಬದಿ ವ್ಯಾಪಾರಸ್ಥರ ಪರದಾಡುವಂತಾಗಿದೆ. ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ. ಮೊದಲ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ಚರಂಡಿಗಳು ಬ್ಲಾಕ್ ಆಗಿ ಮನೆಗೆ ನೀರು ನುಗ್ಗಿದೆ. ಸತತ ಒಂದು ಗಂಟೆ ಸುರಿದ ಮಳೆಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದು, ಅವಾಂತರ ಉಂಟಾಗಿದೆ.
ಹಾಸನ (Hassan) ಜಿಲ್ಲೆಯ ವಿವಿಧೆಡೆ ಧಾರಾಕಾರವಾಗಿ ಆಲಿಕಲ್ಲು ಮಳೆಯಾಗಿದೆ. ಆಲಿಕಲ್ಲು, ಬಿರುಗಾಳಿ, ಗುಡುಗು, ಮಿಂಚು, ಸಿಡಿಲು ಸಹಿತ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆಯಿಂದ ವಾಹನ ಸವಾರರು ಹಾಗೂ ಬೀದಿ ಬದಿ ವ್ಯಾಪಾರಸ್ಥರ ಪರದಾಡುವಂತಾಗಿದೆ. ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ವರುಣ ತಂಪೆರೆದಿದ್ದಾನೆ. ಮೊದಲ ಮಳೆಗೆ ಅವಾಂತರ ಸೃಷ್ಟಿಯಾಗಿದ್ದು, ಚರಂಡಿಗಳು ಬ್ಲಾಕ್ ಆಗಿ ಮನೆಗೆ ನೀರು ನುಗ್ಗಿದೆ. ಸತತ ಒಂದು ಗಂಟೆ ಸುರಿದ ಮಳೆಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದು, ಅವಾಂತರ ಉಂಟಾಗಿದೆ.
