


ಚೆನ್ನೈ: ತಮಿಳುನಾಡು ಚುನಾವಣೆ ಇನ್ನು 3 ದಿನ ಬಾಕಿ ಇರುವಾಗ ರಾಜಕೀಯಕ್ಕೆ ಧುಮುಕಿ ಅದೃಷ್ಟ ಪರೀಕ್ಷೆಗೆ ಇಳಿದಿರುವ ನಟ, ತಮಿಳಗ ವೆಟ್ರಿ ಕಳಗಂ ಪಕ್ಷದ ಸಂಸ್ಥಾಪಕ ವಿಜಯ್‌ಗೆ ತಮ್ಮ ನಾಮಪತ್ರ ತಿರಸ್ಕೃತಗೊಳ್ಳುವ ಆತಂಕ ಹೆಚ್ಚಾಗಿದೆ. ವಿಜಯ್ ಅವರು ಪೆರಂಬೂರ್ ಮತ್ತು ತಿರುಚ್ಚಿ ಪೂರ್ವದಲ್ಲಿ ಸಲ್ಲಿಸಿರುವ ಆಸ್ತಿ ವಿವರಗಳಲ್ಲಿ ಸುಮಾರು 105 ಕೋಟಿ ರೂಪಾಯಿಗಳ ವ್ಯತ್ಯಾಸ ಇರುವುದನ್ನುಮದ್ರಾಸ್ ಹೈಕೋರ್ಟ್ ಅಕ್ರಮ ಎಂದು ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.


ಅಫಿಡವಿಟ್‌ನಲ್ಲಿನಲ್ಲಿರುವ ವ್ಯತ್ಯಾಸ ಮತ್ತು ಕ್ರಿಮಿನಲ್ ಪ್ರಕರಣಗಳ ಮಾಹಿತಿಯನ್ನು ವಿಜಯ್ ಮರೆಮಾಚಿರುವ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಚುನಾವಣಾ ಆಯೋಗ (ECI) ಮತ್ತು ಆದಾಯ ತೆರಿಗೆ ಇಲಾಖೆಗೆ ನೋಟಿಸ್ ಜಾರಿ ಮಾಡಿದೆ.
ಆಸ್ತಿ ವಿವರಗಳಲ್ಲಿನ ಭಾರಿ ವ್ಯತ್ಯಾಸದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದಾಯ ತೆರಿಗೆ ಇಲಾಖೆಯ ತನಿಖಾ ವಿಭಾಗಕ್ಕೆ ಸೂಚಿಸಿದೆ.
ಇದು ಕೇವಲ ಆರಂಭಿಕ ಹಂತದ ವಿಚಾರಣೆಯಾಗಿದ್ದು ನ್ಯಾಯಾಲಯವು ಯಾವುದೇ ಆದೇಶವನ್ನು ಪ್ರಕಟಿಸಿಲ್ಲ. ನೋಟಿಸ್‌ಗೆ ಸಂಬಂಧಪಟ್ಟವರು ನೀಡುವ ಉತ್ತರವನ್ನು ಆಧರಿಸಿ ಮುಂದಿನ ವಿಚಾರಣೆ ನಡೆಯಲಿದೆ.
