ನವದೆಹಲಿ: ಸರಿಯಾಗಿ ಒಂದು ವರ್ಷದ ಹಿಂದೆ ಪಹಲ್ಗಾಮ್‌ನ ಬೈಸರನ್‌ ಕಣಿವೆ ಪ್ರದೇಶದಲ್ಲಿ ನಡೆದ ಉಗ್ರರ ಬೀಭತ್ಸ ಕೃತ್ಯಕ್ಕೆ ಒಂದು ವರ್ಷ ಪೂರ್ಣಗೊಂಡಿದೆ. ಈ ಹೊತ್ತಿನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಮೃತರ ನೆನೆದು ಕಂಬನಿ ಮಿಡಿದಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನ ಹಂಚಿಕೊಂಡಿದ್ದು, ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟ 26 ಮಂದಿಗೆ ಸಂತಾಪ ಸೂಚಿಸಿದ್ದಾರೆ. 

ಕಳೆದ ವರ್ಷ ಈ ದಿನದಂದು ನಡೆದ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಬಲಿಯಾದ ಮುಗ್ಧ ಜೀವಗಳನ್ನು ನೆನಪಿಸಿಕೊಳ್ಳುತ್ತಿದ್ದೇನೆ. ಅವರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ನಷ್ಟವನ್ನ ನಿಭಾಯಿಸುತ್ತಿರುವ ದುಃಖಿತ ಕುಟುಂಬಗಳೊಂದಿಗೆ ನನ್ನ ಆಲೋಚನೆಗಳು ಸಹ ಇವೆ. ಒಂದು ರಾಷ್ಟ್ರವಾಗಿ, ನಾವು ದುಃಖ ಮತ್ತು ದೃಢಸಂಕಲ್ಪದಲ್ಲಿ ಒಗ್ಗಟ್ಟಿನಿಂದ ನಿಲ್ಲುತ್ತೇವೆ ಎಂದು ಭಾವುಕರಾಗಿದ್ದಾರೆ.

ಮುಂದುವರಿದು… ಭಾರತ ಯಾವುದೇ ರೀತಿಯ ಭಯೋತ್ಪಾದನೆಗೆ ಎಂದಿಗೂ ತಲೆಬಾಗುವುದಿಲ್ಲ. ಭಯೋತ್ಪಾದಕರ ಹೇಯ ಯೋಜನೆಗಳು ಎಂದಿಗೂ ಯಶಸ್ವಿಯಾಗುವುದಿಲ್ಲ ಎಂದು ಗುಡುಗಿದ್ದಾರೆ.