

ಪುತ್ತೂರು : ದಿನಾಂಕ 1/5/2026 ಶುಕ್ರವಾರ ಕೇರಳ ಮಾಜಿ ಬಿಜೆಪಿ ರಾಜ್ಯಾಧ್ಯಕ್ಷ ಮಂಜೇಶ್ವರ ವಿಧಾನಸಭಾ ಅಭ್ಯರ್ಥಿ ಕೆ. ಸುರೇಂದ್ರನ್ ರವರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ.

ಬೆಳಗ್ಗೆ 9.30 ಕ್ಕೆ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿ ತದನಂತರ ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.


