


ಬೆಂಗಳೂರು: ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಗಿರೀಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾವೇರಿ ಎನ್ನುವವರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಯೂಟ್ಯೂಬ್ ಚಾನೆಲ್ ಮೂಲಕ ಧರ್ಮಸ್ಥಳ ಹಾಗೂ ಕ್ಷೇತ್ರದಲ್ಲಿ ಮದುವೆಯಾದ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಧಾರ್ಮಿಕ ಭಾವನೆಗಳು ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. 2023, ಡಿ.4ರಂದು ಉಜಿರೆಯ ಜನಾಂದೋಲ ಕಾರ್ಯಕ್ರಮದಲ್ಲಿ ಗಿರೀಶ್ ಭಾಷಣ ವಿಡಿಯೋವನ್ನು ಯೂಟ್ಯೂಬ್ ಚಾನೆಲ್ ಪ್ರಸಾರ ಮಾಡಿತ್ತು


