

ಎನ್.ಆರ್.ಪುರ : ಶೃಂಗೇರಿ ಕ್ಷೇತ್ರದ ಮರುಎಣಿಕೆ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆ ನೀಡಿ ಟಿ.ಡಿ. ರಾಜೇಗೌಡ ಅವರ ಶಾಸಕ ಸ್ಥಾನವನ್ನು ಎತ್ತಿಹಿಡಿದ ಹಿನ್ನೆಲೆಯಲ್ಲಿ ನರಸಿಂಹರಾಜಪುರದಲ್ಲಿ (ಎನ್.ಆರ್. ಪುರ) ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.

ಸುಪ್ರೀಂ ಕೋರ್ಟ್‌ನ ಈ ತೀರ್ಪು ಪ್ರಜಾಪ್ರಭುತ್ವಕ್ಕೆ ಸಂದ ಜಯ ಮತ್ತು ಸತ್ಯಕ್ಕೆ ಸಿಕ್ಕ ಪ್ರತಿಫಲ ಎಂದು ಕಾರ್ಯಕರ್ತರು ಬಣ್ಣಿಸಿದರು. ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಜಮಾಯಿಸಿದ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ಶಾಸಕ ಟಿ. ಡಿ. ರಾಜೇಗೌಡ ಹಾಗೂ ಕಾಂಗ್ರೆಸ್ ಪರವಾಗಿ ಘೋಷಣೆಗಳನ್ನು ಕೂಗುವ ಮೂಲಕ ತಮ್ಮ ಸಂತಸ ವ್ಯಕ್ತಪಡಿಸಿದರು.


ಕಳೆದ ವಾರವಷ್ಟೇ ನಡೆದ ಮರುಎಣಿಕೆಯಲ್ಲಿ ಬಿಜೆಪಿಯ ಡಿ.ಎನ್. ಜೀವರಾಜ್ ಗೆದ್ದಿದ್ದಾರೆ ಎಂಬ ಸುದ್ದಿಯಿಂದಾಗಿ ಕ್ಷೇತ್ರದಲ್ಲಿ ಒಂದು ರೀತಿಯ ರಾಜಕೀಯ ಗೊಂದಲ ಸೃಷ್ಟಿಯಾಗಿತ್ತು. ಆದರೆ ಇಂದು ಸುಪ್ರೀಂ ಕೋರ್ಟ್ “ಪ್ರಜಾಪ್ರಭುತ್ವವನ್ನು ಹೈಜಾಕ್ ಮಾಡಲು ಬಿಡುವುದಿಲ್ಲ” ಎಂಬ ಖಡಕ್ ಎಚ್ಚರಿಕೆಯೊಂದಿಗೆ ಹಳೆಯ ಸ್ಥಿತಿಯನ್ನೇ ಮರುಸ್ಥಾಪಿಸಲು ಆದೇಶಿಸಿರುವುದು ಕಾಂಗ್ರೆಸ್ ಪಾಳಯದಲ್ಲಿ ಹೊಸ ಸಂಚಲನ ಮೂಡಿಸಿದೆ.
