


ಜೈಪುರ/ನವದೆಹಲಿ, ಮೇ 12: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನ ಪೊಲೀಸರ ವಿಶೇಷ ಕಾರ್ಯಾಚರಣೆ ತಂಡ (SOG) ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು 45 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
ಈ ಪೈಕಿ ಅರ್ಧಕ್ಕಿಂತ ಹೆಚ್ಚು ಜನರನ್ನು ಸದ್ಯ ಪೊಲೀಸ್ ಕಸ್ಟಡಿಯಲ್ಲೇ ಇರಿಸಲಾಗಿದೆ. ಕೇಂದ್ರ ಸರ್ಕಾರವು ಈಗಾಗಲೇ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ (CBI) ವಹಿಸಲು ಆದೇಶಿಸಿದ್ದು, ಶೀಘ್ರದಲ್ಲೇ ಈ ಆರೋಪಿಗಳನ್ನು ಸಿಬಿಐ ವಶಕ್ಕೆ ಒಪ್ಪಿಸುವ ಸಾಧ್ಯತೆಯಿದೆ. ದೇಶಾದ್ಯಂತ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ಈ ಜಾಲದ ಮೂಲವನ್ನು ಪತ್ತೆಹಚ್ಚಲು ತನಿಖಾ ಸಂಸ್ಥೆಗಳು ಮುಂದಾಗಿವೆ.


