ಹಾಸನ: ಒಬ್ಬ ಸಾಮಾನ್ಯ ಅಸಿಸ್ಟೆಂಟ್ ಡೈರೆಕ್ಟರ್ ಮಗ ಇಂದು ಡಿಎಂಕೆ, ಎಐಎಡಿಎಂಕೆ ಮತ್ತು ಕಾಂಗ್ರೆಸ್‌ನ್ನು ಹಿಂದೆ ಹಾಕಿ ತಮಿಳುನಾಡಿನಲ್ಲಿ ಹೊಸ ಶಕ್ತಿಯಾಗಿ ಹೊರಹೊಮ್ಮಿದ್ದಾರೆ ಎಂದು ತಮಿಳುನಾಡು ಸಿಎಂ ಜೋಸೆಫ್ ವಿಜಯ್ (Vijay) ಅವರನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು (H.D.Deve Gowda) ಹಾಡಿಹೊಗಳಿದರು.

ಹಾಸನದಲ್ಲಿ ಮಾತನಾಡಿದ ಅವರು, ಕೆ.ಕಾಮರಾಜ್, ಎಂಜಿಆರ್, ಕರುಣಾನಿಧಿ, ಜಯಲಲಿತಾ ಅವರಂತಹ ನಾಯಕರ ನಂತರ ವಿಜಯ್ ದೊಡ್ಡ ಮಟ್ಟದಲ್ಲಿ ಜನಬೆಂಬಲ ಪಡೆದಿದ್ದಾರೆ. ಅವರು ಎಲ್ಲಿಗೆ ಹೋದರೂ ಲಕ್ಷಾಂತರ ಜನ ಸೇರುತ್ತಾರೆ. ಒಬ್ಬ ಸಾಮಾನ್ಯ ಅಸಿಸ್ಟೆಂಟ್ ಡೈರೆಕ್ಟರ್ ಮಗ ಇಷ್ಟು ಎತ್ತರಕ್ಕೆ ಬೆಳೆದಿರುವುದು ಸಂತಸದ ವಿಷಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು