Akshaya Sharadhotsava
Darbe Salon
Mahalingeshwara Car Air Condition
New Dot Dress Mart

ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಮಾರಾಟಕ್ಕೆ ಯತ್ನಿಸಿದ ಆರೋಪಿತೆಯನ್ನು ಬಂಧಿಸಿ 35,00,000/- ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯ ವಶಪಡಿಸಿಕೊಂಡ ಮಂಗಳೂರು ನಗರದ ಮುಲ್ಕಿ ಪೊಲೀಸರು.

Out Look Fashion

ದಿನಾಂಕ:12-05-2026 ರಂದು ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆ ಸುಹಾನ ಪ್ರಾಯ: 21 ವರ್ಷ ತಂದೆ: ದಿ|| ಮೊಹಮ್ಮದ ಗೌಸ್ ವಾಸ: ಹುಲಿದೇವರ ಬನ ಸಾಗರ ತಾಲೂಕು ಶಿವಮೋಗ್ಗ ಜಿಲ್ಲೆ, ಹಾಲಿ ಕುಂದಾಪುರ ಕಾಲೇಜಿನ ಅಂತಿಮ ವರ್ಷದ BCA ವಿದ್ಯಾರ್ಥಿನಿ. ಸುಹಾನಾ ಎಂಬಾಕೆಯನ್ನು ವಶಕ್ಕೆ ಪಡೆದು ಅವಳ ಬಳಿ ಇದ್ದ ಸುಮಾರು 35,00,000/- ರೂ ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವಿಡ ಗಾಂಜಾ ಎಂಬ ಮಾದಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್ ಮತ್ತು ಇತರ ಸೊತ್ತು ವಶಪಡಿಸಿಕೊಳ್ಳಲಾಗಿದೆ.

Jaya Refrigeration and Air Condition

ಮಾದಕ ವಸ್ತುವನ್ನು ಆರೋಪಿತೆಯು ಚೆನ್ನೈ ನಿಂದ ತರಿಸಿ ಕೊಂಡು ಮಂಗಳೂರಿನಲ್ಲಿ ಅಕ್ರಮವಾಗಿ ಪೂರೈಕೆ ಮಾಡಿ ಹಣ ಗಳಿಸುವ ಉದ್ದೇಶದಿಂದ ತಂದಿರುವುದಾಗಿ ತಿಳಿದು ಬಂದಿರುತ್ತದೆ. ಸದ್ರಿ ಆರೋಪಿತೆಯ ವಿರುದ್ದ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 32/2026 ಕಲಂ: 8(ಸಿ), 20(ಬಿ) ರಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಪಣಂಬೂರು ACP ತಂಡ ಹಾಗೂ ಮೂಲ್ಕಿ ಠಾಣೆಯ ತಂಡ ದಿಂದ ಕಾರ್ಯಾಚರಣೆ ನಡೆಸಲಾಗಿದೆ.

ಆರೋಪಿತೆಯ ಮೇಲೆ ಈ ಕೆಳಗಿನಂತೆ ಪ್ರಕರಣಗಳು ದಾಖಲಾಗಿರುತ್ತದೆ
1) ಕಾವೂರು ಪೊಲೀಸ್ ಠಾಣಾ ಅ. ಕ್ರ 37/2026 ಕಲಂ: 8(C), 22(C) NDPS Act.
2) ಬೆಂಗಳೂರು ಅಂತರಾಷ್ಟ್ರೀಯ ವಿಮಾನ ಕಸ್ಟಮ್ O. R No: 177/2025-26 U/S 20(b), 2(B), 23(b), 27(A) & 29 NDPS Act.