ಚೆನ್ನೈ: ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಟಿವಿಕೆ ಮುಖ್ಯಸ್ಥ ವಿಜಯ್‌ ಪಾಸ್‌ ಆಗಿದ್ದಾರೆ. ಸರ್ಕಾರಕ್ಕೆ 144 ಮಂದಿ ಶಾಸಕರು ಬೆಂಬಲ ವ್ಯಕ್ತಪಡಿಸಿದ್ದಾರೆ.ಟಿವಿಕೆ, ಕಾಂಗ್ರೆಸ್‌, ಸಿಪಿಎಂ, ಸಿಪಿಐ, ಮುಸ್ಲಿಮ್‌ ಲೀಗ್‌, ವಿಸಿಕೆ ಜೊತೆ ಎಐಎಡಿಎಂಕೆಯ ಬಂಡಾಯ ಎದ್ದಿರುವ 27 ಶಾಸಕರು ವಿಜಯ್‌ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ವಿಜಯ್‌ ಸರ್ಕಾರಕ್ಕೆ 118 ಶಾಸಕರ ಬೆಂಬಲವಿತ್ತು. ಆದರೆ ಬಹುಮತ ಸಾಬೀತು ಪಡಿಸುವ ವೇಳೆ ಡಿಎಂಕೆ ಮತ್ತು ಪಿಎಂಕೆ ಶಾಸಕರು ಸಭಾತ್ಯಾಗ ಮಾಡಿದರು. ಒಬ್ಬ ಬಿಜೆಪಿ ಶಾಸಕರು ಮತದಾನದಿಂದ ದೂರ ಉಳಿದರು. ಸದನದಲ್ಲಿದ್ದ 22 ಎಐಡಿಎಂಕೆ ಶಾಸಕರು ವಿಶ್ವಾಸಮತದ ವಿರುದ್ಧ ಮತ ಹಾಕಿದರು.