ನವದೆಹಲಿ: ಭಾರತ ತಂಡದ ಮಾಜಿ ನಾಯಕ ಹಾಗೂ ತರಬೇತುದಾರ ರಾಹುಲ್ ದ್ರಾವಿಡ್ ಯುರೋಪಿಯನ್ ಟಿ20 ಲೀಗ್‌ನ (ETPL) ಉದ್ಘಾಟನಾ ಆವೃತ್ತಿಯ ತಂಡವೊಂದರ ಸಹ ಮಾಲೀಕತ್ವ ವಹಿಸಿಕೊಂಡಿದ್ದಾರೆ.

ಅಭಿಷೇಕ್ ಬಚ್ಚನ್ ಸಹ-ಸ್ಥಾಪಕರಾಗಿರುವ ETPL ಟೂರ್ನಮೆಂಟ್‌ನಲ್ಲಿ, ರಾಹುಲ್ ದ್ರಾವಿಡ್ ಅವರು ಐರ್ಲೆಂಡ್ ಮೂಲದ ಡಬ್ಲಿನ್ ಗಾರ್ಡಿಯನ್ಸ್’ (Dublin Guardians) ಫ್ರಾಂಚೈಸಿ ತಂಡವನ್ನು ಖರೀದಿಸಿ ಅದರ ಅಧಿಕೃತ ಮಾಲೀಕರಾಗಿದ್ದಾರೆ. ಆಗಸ್ಟ್ 26 ರಿಂದ ಆರಂಭವಾಗಲಿರುವ ಈ ಟೂರ್ನಿಯಲ್ಲಿ ಡಬ್ಲಿನ್ ಗಾರ್ಡಿಯನ್ಸ್ ತಂಡವನ್ನು ಟೀಮ್ ಇಂಡಿಯಾ ಮಾಜಿ ಆಲ್‌ರೌಂಡರ್ ರವಿಚಂದ್ರನ್ ಅಶ್ವಿನ್ (Ashwin) ಮುನ್ನಡೆಸಲಿದ್ದಾರೆ.

ಈ ಹಿಂದೆ ಇವರಿಬ್ಬರು ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಜೊತೆಯಾಗಿದ್ದರು. ಈಗ ರಾಹುಲ್ ದ್ರಾವಿಡ್ ಹಾಗೂ ಆರ್ ಅಶ್ವಿನ್ ಮತ್ತೊಮ್ಮೆ ಒಟ್ಟಾಗಿ ಕೆಲಸ ಮಾಡಲಿದ್ದಾರೆ.

ಯುರೋಪ್ ರಾಷ್ಟ್ರಗಳಲ್ಲಿ ಕ್ರಿಕೆಟ್ ಪ್ರೋತ್ಸಾಹ ನೀಡಲು ಈ ಟೂರ್ನಿಯನ್ನು ಆಯೋಜಿಸಲಾಗಿದೆ. ಐರ್ಲೆಂಡ್ ಹಾಗೂ ಯುರೋಪಿನಾದ್ಯಂತ ಯುವ ಕ್ರಿಕೆಟಿಗರಿಗೆ ಈ ಟೂರ್ನಿಯಲ್ಲಿ ಅವಕಾಶ ಕಲ್ಪಿಸಲಾಗುತ್ತದೆ.