


ಬೆಂಗಳೂರು: ಕರ್ನಾಟಕ (Karnataka) ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಎಸ್‌ಐಆರ್‌ಗೆ (SIR) (ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ) ದಿನಾಂಕ ಘೋಷಣೆ ಆಗಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ನಡೆಸಲಾಗುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತರಾದ ಅನ್ಬುಕುಮಾರ್ ತಿಳಿಸಿದರು.
ಎಸ್‌ಐಆರ್ ಘೋಷಣೆ ಹಿನ್ನೆಲೆ ಕೆ.ಆರ್ ಸರ್ಕಲ್ ಬಳಿ ಇರುವ ಕೇಂದ್ರ ಚುನಾವಣಾ ಆಯೋಗದ ಕಚೇರಿಯಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.ಈಗಾಗಲೇ ಎಸ್‌ಐಆರ್ ಗಾಗಿ ಮ್ಯಾಪ್ ಕಾರ್ಯ ಮಾಡಲಾಗಿದೆ. ಎಸ್‌ಐಆರ್‌ಗೆ ಈಗಾಗಲೇ ಚುನಾವಣಾ ಆಯೋಗ ದಿನಾಂಕ ಘೋಷಿಸಿದೆ. ಜೂನ್ 20ರಿಂದ ತರಬೇತಿ ಮತ್ತು ಮುದ್ರಣ ಕಾರ್ಯ ಶುರುವಾಗುತ್ತದೆ. ಜೂ.30 ರಿಂದ ಜು.29 ರ ವರೆಗೆ ಮನೆ ಮನೆಗೆ ಭೇಟಿ ನೀಡಿ ಪರಿಷ್ಕರಣೆ ಮಾಡಲಾಗುವುದು. ಮತದಾರರ ಪಟ್ಟಿಯಲ್ಲಿ ಸೇರಲು 18 ವರ್ಷ ಪೂರ್ಣವಾಗಿರಬೇಕು. ಅಕ್ಟೋಬರ್ 7ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸುವುದಾಗಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾಹಿತಿ ನೀಡಿದರು.


