ತಿರುನಂತಪುರಂ: ಕೇರಳಂ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀರಿಸಿದ ವಿ.ಡಿ ಸತೀಶನ್‌ ಹೊಸ ಸರ್ಕಾರದ ಮೊದಲ ಸಂಪುಟ ಸಭೆಯಲ್ಲೇ ಪಂಚ ಗ್ಯಾರಂಟಿ ಪೈಕಿ ಎರಡು ಗ್ಯಾರಂಟಿಗಳನ್ನ ಈಡೇರಿಸಿದ್ದಾರೆ.

ಜೂನ್‌ 15 ರಿಂದ ರಾಜ್ಯದ ಎಲ್ಲಾ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಲಭ್ಯವಿರಲಿದೆ ಎಂದು ವಿಡಿಎಸ್‌ ಘೋಷಣೆ ಮಾಡಿದ್ದಾರೆ. ಅಲ್ಲದೇ ವೃದ್ಧರಿಗಾಗಿ ಪ್ರತ್ಯೇಕ ಇಲಾಖೆ ಸ್ಥಾಪನೆಗೂ ಸಂಪುಟ ಒಪ್ಪಿರುವುದಾಗಿ ತಿಳಿಸಿದ್ದಾರೆ.