ಬೆಂಗಳೂರು: ವೇತನ ಪರಿಷ್ಕರಣೆಗೆ ಆಗ್ರಹಿಸಿ ಮುಷ್ಕರಕ್ಕೆ ಸಿದ್ಧವಾಗಿರುವ ಸರ್ಕಾರಿ ಸಾರಿಗೆ ನೌಕರರಿಗೆ ಕೆಎಸ್‌ಆರ್‌ಟಿಸಿ (KSRTC) ಶಿಸ್ತುಕ್ರಮದ ಎಚ್ಚರಿಕೆ ನೀಡಿದೆ. ನಾಡಿದ್ದು ಕೆಲಸ ಮಾಡದಿದ್ದರೆ ‘ನೋ ವರ್ಕ್‌, ನೋ ಪೇ’ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ಮೇ 20 ರಂದು ಹೋರಾಟದಲ್ಲಿ ಭಾಗಿಯಾಗಲು ಸಿದ್ಧವಾಗಿರುವ ಸಾರಿಗೆ ನೌಕರರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಕೆಎಸ್‌ಆರ್‌ಟಿಸಿ ಎಂಡಿ ಅಕ್ರಮ್‌ ಪಾಷಾ ಎಚ್ಚರಿಸಿದ್ದಾರೆ. 

ಎಲ್ಲಾ ಸಾರಿಗೆ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಪ್ರತಿಭಟನೆಯಲ್ಲಿ ಭಾಗಿಯಾದರೆ ಸೇವಾ ನಿಯಮಗಳ ಅನ್ವಯ ಕಠಿಣ ಕ್ರಮ ಕೈಗೊಳ್ಳಲಾಗುವುದು. ಸಾರಿಗೆ ಸಂಸ್ಥೆ ಸಾರ್ವಜನಿಕ ಉಪಯುಕ್ತ ಸಂಸ್ಥೆ ಅಂತ ಪರಿಗಣಿಸಲಾಗಿದೆ. ನಾಡಿದ್ದು ಬಸ್‌ಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಾಗಬಾರದು. ಅನಿವಾರ್ಯ ಸಂದರ್ಭ ಹೊರತುಪಡಿಸಿ ನೌಕರರಿಗೆ ರಜೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.