ಚೆನ್ನೈ: ಇಂಡಿಯನ್ ಪ್ರೀಮಿಯರ್ ಲೀಗ್‌ನ (IPL 2026) 63ನೇ ಪಂದ್ಯವು ಇಂದು ಚೆಪಾಕ್‌ ಮೈದಾನದಲ್ಲಿ ನಡೆಯಲಿದ್ದು, ಚೆನ್ನೈ ಸೂಪರ್‌ ಕಿಂಗ್ಸ್‌ ಹಾಗೂ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ.

ಋತುರಾಜ್ ಗಾಯಕ್ವಾಡ್ ನೇತೃತ್ವದ ಸಿಎಸ್‌ಕೆ (CSK) ತಂಡಕ್ಕೆ ತವರಿನಲ್ಲಿ ಇಂದು ಮಾಡು ಇಲ್ಲವೇ ಮಡಿ ಸವಾಲು ಎದುರಾಗಿದೆ. ಏಕೆಂದ್ರೆ 12 ಪಂದ್ಯಗಳಲ್ಲಿ 6 ಪಂದ್ಯ ಗೆದ್ದು, 12 ಅಂಕಗಳೊಂದಿಗೆ 5ನೇ ಸ್ಥಾನದಲ್ಲಿರುವ ಚೆನ್ನೈ ತಂಡ ಪ್ಲೇ ಆಫ್ (IPL Playoffs) ಪ್ರವೇಶಿಸಲು ಈ ಪಂದ್ಯ ನಿರ್ಣಾಯಕವಾಗಲಿದೆ. ಒಂದು ವೇಳೆ ಈ ಪಂದ್ಯದಲ್ಲಿ ಚೆನ್ನೈ ಪರಾಭವಗೊಂಡರೆ ಪ್ಲೇ ಆಫ್ ಹಾದಿ ಅತ್ಯಂತ ಕಠಿಣವಾಗಲಿದೆ.ಸತತ ಸೋಲಿನ ಸುಳಿಗೆ ಸಿಲುಕಿರುವ ಪಂಜಾಬ್ ಕಿಂಗ್ಸ್ (Punjab Kings) ಮುಂದಿನ ಪಂದ್ಯದಲ್ಲೂ ಸೋತರೆ 13 ಅಂಕಗಳೊಂದಿಗೆ ಟೂರ್ನಿಯಿಂದ ಹೊರಬೀಳಲಿದೆ. ಇತ್ತ ರಾಜಸ್ಥಾನ್‌ ರಾಯಲ್ಸ್ ತಂಡ ಬಾಕಿಯಿರುವ ಎರಡೂ ಪಂದ್ಯಗಳಲ್ಲಿ ಸೋಲಬೇಕು. ಆಗ ಸಿಎಸ್‌ಕೆ ತಂಡ ತನ್ನ ಕೊನೆಯ ಪಂದ್ಯದಲ್ಲಿ ಗೆದ್ದರೆ ಮಾತ್ರ ಪ್ಲೇ ಆಫ್ ಪ್ರವೇಶಿಸಬಹುದು. ಹಾಗಾಗಿ ಚೆನ್ನೈ ತಂಡ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.