

ದಿನಾಂಕ :- 18.05.2026 ರಂದು ರಾತ್ರಿ, ವಿಟ್ಲ ಕುಡ್ತಮುಗೇರು ಎಂಬಲ್ಲಿರುವ ಹೊಳೆಯಿಂದ ಪಿಕ್ ಅಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಬಗ್ಗೆ ರಾಮಕೃಷ್ಣ ಪೊಲೀಸ್ ಉಪ ನಿರೀಕ್ಷಕರು (ಕಾ&ಸು) ವಿಟ್ಲ ಪೊಲೀಸ್ ಠಾಣೆರವರಿಗೆ ಮಾಹಿತಿ ಬಂದ ಮೇರೆಗೆ, ಸದ್ರಿಯವರು ಠಾಣಾ ಸಿಬ್ಬಂದಿಗಳೊಂದಿಗೆ ಬಂಟ್ವಾಳ ಕನ್ಯಾನ ಗ್ರಾಮದ ಬೈರಿಕಟ್ಟೆ ಎಂಬಲ್ಲಿ ಸದ್ರಿ ಪಿಕ್ ಅಪ್ ವಾಹನವನ್ನು ತಡೆದು ಪರಿಶೀಲಿಸಿದಾಗ ಮರಳು ಲೋಡ್ ಮಾಡಿರುವುದು ಕಂಡುಬಂದಿರುತ್ತದೆ.

ಈ ಬಗ್ಗೆ ವಾಹನದ ಚಾಲಕ ಬಂಟ್ವಾಳ ಕೊಳ್ನಾಡು ನಿವಾಸಿ ರೆನೋಲ್ ಮೆಲ್ರೋಯ್ ಡಿಸೋಜ (31) ಎಂಬಾತನನ್ನು ವಿಚಾರಿಸಿದಾಗ ಯಾವುದೇ ಪರವಾನಿಗೆ ಅಥವಾ ದಾಖಲಾತಿಗಳು ಇಲ್ಲದೇ ಮಾರಳು ಸಾಗಿಸುತ್ತಿರುವುದಾಗಿ ತಿಳಿಸಿದ್ದು, ಮುಂದಿನ ಕಾನೂನು ಕ್ರಮಕ್ಕಾಗಿ ಸದ್ರಿ ಪಿಕ್ ಅಪ್ ವಾಹನವನ್ನು ಮರಳಿನ ಸಮೇತವಾಗಿ ಸ್ವಾಧೀನಪಡಿಸಿ, ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 113/2026, ಕಲಂ: 303(2) BNS 2023, ಕಲಂ: 4(1), 4(1A), 21 MMDR (MINES AND MINERALS REGULATION OF DEVELOPMENT) ACT 1957 ಮತ್ತು ಕಲಂ: 3, 44 KARNATAKA MINOR MINERAL CONSISTENT RULE 1994 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


