ಡೆಹ್ರಾಡೂನ್: ಉತ್ತರಾಖಂಡದ ಋಷಿಕೇಶ (Rishikesh) ಖಾಂಡ್ ಗಾಂವ್ (Khand Gaon) ಪ್ರದೇಶದ ಯೋಗ ನಗರಿ ರೈಲು ನಿಲ್ದಾಣದ ಬಳಿ ಸೋಮವಾರ ರಾತ್ರಿ ಉಜ್ಜಿಯಿನಿ ಎಕ್ಸ್‌ಪ್ರೆಸ್ ರೈಲಿನ ಮೂರು ಬೋಗಿಗಳು ಹಳಿತಪ್ಪಿದ್ದು‌ (Ujjaini Express Derailed), ಭಾರೀ ದುರಂತವೊಂದು ತಪ್ಪಿದೆ.

ಸೋಮವಾರ ರಾತ್ರಿ 9:30ರ ವೇಳೆಗೆ ಘಟನೆ ನಡೆದಿದೆ. ಅಪಘಾತ ಸಂಭವಿಸಿದ ವೇಳೆ ರೈಲಿನಲ್ಲಿ ಯಾವುದೇ ಪ್ರಯಾಣಿಕರು ಇರಲಿಲ್ಲ ಮತ್ತು ಯಾರಿಗೂ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದಿನನಿತ್ಯದ ನಿರ್ವಹಣಾ ಕಾರ್ಯಾಚರಣೆಯ ಸಮಯದಲ್ಲಿ ಬ್ರೇಕ್ ವೈಫಲ್ಯದಿಂದಾಗಿ ಹಳಿತಪ್ಪಿದೆ ಎಂದು ಶಂಕಿಸಲಾಗಿದೆ.

ರೈಲು ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ಘಟನೆಗೆ ನಿಖರ ಕಾರಣ ಏನು ಎಂದು ತನಿಖೆ ನಡೆಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.