ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆಯ ಕರೆ ನೀಡಲಾಗಿದೆ. ಪರಿಶಿಷ್ಟ ಪಂಗಡದ ಕುಂಬಂಗಳ ಬಡ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಮೇ 20ರಂದು ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ಮುಂದಾಗಿದೆ.

Screenshot

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಡ ಹಾಗೂ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಸರ್ಕಾರದಿಂದ ಹಕ್ಕು ಪತ್ರ ನೀಡುವ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ಬಿಜೆಪಿ ಜನತಾ ಪಾರ್ಟಿ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.

ನಾಳೆ ದಿನಾಂಕ 20.05.2026 ರಂದು ಬೆಳಗ್ಗೆ 9:30ಕ್ಕೆ, ಬಂಟ್ವಾಳ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೇರಿ ಪ್ರತಿಭಟನೆ ನಡೆಸಲಿದ್ದಾರೆ.

ಬಡ ಕುಟುಂಬಗಳ ಸಮಸ್ಯೆಗೆ ಶೀಘ್ರ ಪರಿಹಾರ ನೀಡಬೇಕು ಹಾಗೂ ಹಕ್ಕು ಪತ್ರ ವಿತರಣೆಯಲ್ಲಿ ವಿಳಂಬ ಮಾಡಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಈ ಪ್ರತಿಭಟನೆಗೆ ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಸಾರ್ವಜನಿಕರು ಬೆಂಬಲ ಸೂಚಿಸಿದ್ದಾರೆ.