Screenshot

ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ಈಜಲು ತೆರಳಿ ನೀರುಪಾಲಾದ ದುರ್ಘಟನೆ ಕಟಾರದಲ್ಲಿ ನಡೆದಿದೆ. ಘಟನೆಯು ಸ್ಥಳೀಯರಲ್ಲಿ ಆತಂಕ ಮತ್ತು ದುಃಖದ ವಾತಾವರಣ ಸೃಷ್ಟಿಸಿದೆ.

ಕಾಲೇಜು ವಿದ್ಯಾರ್ಥಿಯೋರ್ವ ಈಜಲು ತೆರಳಿ ನೀರುಪಾಲಾದ ಘಟನೆ ಕಟಾರದಲ್ಲಿ ನಡೆದಿದೆ. ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರು ತೆರಳಿದ್ದಾರೆ.

ವಿದ್ಯಾರ್ಥಿಯ ಪತ್ತೆಗಾಗಿ ಕಾರ್ಯಾಚರಣೆ ನಡೆಯುತ್ತಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.