ಬಂಟ್ವಾಳ: ಬಿ ಮೂಡ ಗ್ರಾಮದ ಕಂಚಿಕಾರ ಪೇಟೆ ಸಮೀಪ ನದಿ ಬದಿಯಲ್ಲಿ ಪತ್ತೆಯಾಗಿದ್ದ ಅಪರಿಚಿತ ವ್ಯಕ್ತಿಯ ಮೃತದೇಹಕ್ಕೆ ಇದೀಗ ಗುರುತು ಪತ್ತೆಯಾಗಿದೆ.

Screenshot

ಮೇ 21ರಂದು ಬೆಳಿಗ್ಗೆ ನದಿ ನೀರಿನಲ್ಲಿ ಸುಮಾರು 50 ರಿಂದ 55 ವರ್ಷದ ವ್ಯಕ್ತಿಯ ಮೃತದೇಹ ತೇಲುತ್ತಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಸ್ಥಳಕ್ಕೆ ತೆರಳಿದವರು ಮೃತದೇಹವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿತ್ತು.

ಮುಂದಿನ ತನಿಖೆಯಲ್ಲಿ ಮೃತ ವ್ಯಕ್ತಿ ಬಂಟ್ವಾಳ ಗೂಡಿನಬಳಿ ನಿವಾಸಿ ಇರ್ಫಾನ್ (39) ಎಂದು ಗುರುತಿಸಲಾಗಿದೆ. ಮೃತರ ತಂದೆಯವರು ಗುರುತು ಪತ್ತೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಮೃತರ ಸಾವಿನ ಬಗ್ಗೆ ಕುಟುಂಬ ಸದಸ್ಯರು ಸಂಶಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಮೃತದೇಹವನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ವರದಿ ಪಡೆದು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.