

ನವದೆಹಲಿ: ಪೆಟ್ರೋಲ್, ಡೀಸೆಲ್ ಖರೀದಿಗೆ (Petrol, Diesel Purchase) ಯಾವುದೇ ಮಿತಿಯಿಲ್ಲ ಎಂದು ಕೇಂದ್ರ ಸರ್ಕಾರ (Central Government) ಗುರುವಾರ (ಇಂದು) ಪುನರುಚ್ಚರಿಸಿದೆ. ಅಲ್ಲದೇ ಅಕ್ರಮ ವಿತರಣೆ ಮತ್ತು ದಾಸ್ತಾನು ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆಯನ್ನೂ ನೀಡಿವೆ.

ಕೆಲವು ರಾಜ್ಯಗಳಲ್ಲಿ ಪೆಟ್ರೋಲ್ ಬಂಕ್‌ಗಳು (Petrol Bunks) ಪೆಟ್ರೋಲ್ ಮತ್ತು ಡೀಸೆಲ್ ಖರೀದಿಗೆ ಮಿತಿ ಹೇರಿವೆ ವದಂತಿಗಳು ಹಾಗೂ ತೈಲ ಪೂರೈಕೆಯಲ್ಲಿನ ಅಡಚಣೆ ವರದಿಗಳ ಕುರಿತು ಇಂಡಿಯನ್ ಆಯಿಲ್ ಪ್ರಕಟಣೆ ಹೊರಡಿಸಿದೆ. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಕೂಡ ತೈಲ ಖರೀದಿಗೆ ಮಿತಿ ಇಲ್ಲ ಎಂದು ಪುನರುಚ್ಛರಿಸಿದೆ.


ಜಂಟಿ-ಸಚಿವಾಲಯ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೆಟ್ರೋಲಿಯಂ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ (Sujata Sharma), ಅವಶ್ಯಕತೆಗಳನ್ನು ಪೂರೈಸಲು ನಮ್ಮಲ್ಲಿ ಸಾಕಷ್ಟು ದಾಸ್ತಾನುಗಳಿವೆ. ಜಾಗತಿಕ, ಭೌಗೋಳಿಕ, ರಾಜಕೀಯ ಉದ್ವಿಗ್ನತೆ ಆಮದುಗಳ ಮೇಲೆ ಪರಿಣಾಮ ಬೀರುತ್ತಿದ್ದರೂ, ಭಾರತವು ಪೆಟ್ರೋಲ್, ಡೀಸೆಲ್, ಎಲ್‌ಪಿಜಿ ಮತ್ತು ನೈಸರ್ಗಿಕ ಅನಿಲದ ಸಾಕಷ್ಟು ದಾಸ್ತಾನನ್ನು ಹೊಂದಿದೆ. ನಾಗರಿಕರ ಮೇಲಿನ ಹೊರೆ ಕಡಿಮೆ ಮಾಡಲು ಸರ್ಕಾರ ಅಗತ್ಯ ಕ್ರಮಗಳನ್ನ ತೆಗೆದುಕೊಂಡಿದೆ. ದೇಶಾದ್ಯಂತ ಹೆಚ್ಚುತ್ತಿರುವ ಬೇಡಿಕೆಗಳನ್ನು ಪೂರೈಸಲು ಎಲ್‌ಪಿಜಿ ಉತ್ಪಾದನೆಯನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.
